Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:13 - ಕನ್ನಡ ಸತ್ಯವೇದವು J.V. (BSI)

13 ಅವರ ಜೊತೆಯಲ್ಲಿರುವದಕ್ಕೆ ವಿುಕ್ಕಾದವರೊಳಗೆ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರೊಂದಿಗೆ ನಿಂತುಕೊಳ್ಳಲು ತಮಗೂ ಯೋಗ್ಯತೆ ಇದೆಯೆಂದು ಬೇರೆ ಯಾರಿಗೂ ಅನ್ನಿಸಲಿಲ್ಲ. ಜನರೆಲ್ಲರೂ ಅಪೊಸ್ತಲರ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಾಂಡ್ಯಾಚ್ಯಾ ಭಾಯ್ಲ್ಯಾಲೊಕಾಕ್ನಿ ತೆಂಚ್ಯಾಕ್ನಾ ಇಬೆ ರಾವ್ಕ್ ಧೈರೊ ನತ್ತೊ ,ಕಶ್ಯಾಕ್ ಮಟ್ಲ್ಯಾರ್ ಲೊಕಾ ಅಪೊಸ್ತಲಾಂಚ್ಯಾ ವಿಶಯಾತ್ ಲೈ ಬರಿ ಗೊಸ್ಟಿಯಾಚ್ ಸಾಂಗಿತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:13
19 ತಿಳಿವುಗಳ ಹೋಲಿಕೆ  

ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು - ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಬೇಡಿಕೊಂಡನು. ಪಿಲಾತನು ಅಪ್ಪಣೆಕೊಡಲಾಗಿ ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.


ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.


ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ನಾವು ಮೇರೆದಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹಿಗ್ಗುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿಹೊಂದಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು