Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:14 - ಕನ್ನಡ ಸತ್ಯವೇದವು J.V. (BSI)

14 ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಲೈ ಲೊಕಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಲಾಗಲಿ ,ಅನಿ ಲೈ ಲೊಕಾ ಘೊಮಾನ್ಸಾ ಅನಿ ಬಾಯ್ಕಾ ಮನ್ಸಾನಿ ಧನಿಯಾಚೆರ್ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:14
24 ತಿಳಿವುಗಳ ಹೋಲಿಕೆ  

ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಕ್ರಿಸ್ತ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ ಹೆಂಗಸರಿಗೂ ಬೇಡೀಹಾಕಿಸುತ್ತಾ ಅವರನ್ನು ಸೆರೆಮನೆಗಳಿಗೆ ಕೊಡಿಸುತ್ತಾ ಇದ್ದೆನು, ಅವರ ಕೊಲೆಗಾದರೂ ಹಿಂತೆಗೆಯಲಿಲ್ಲ.


ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.


ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು.


ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು