Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:16 - ಕನ್ನಡ ಸತ್ಯವೇದವು J.V. (BSI)

16 ಯೆರೂಸಲೇವಿುನ ಸುತ್ತಲಿರುವ ಊರುಗಳ ಜನರು ಸಹ ರೋಗಿಗಳನ್ನೂ ದೆವ್ವಗಳ ಕಾಟವಿದ್ದವರನ್ನೂ ಹೊತ್ತುಕೊಂಡು ಗುಂಪು ಗುಂಪಾಗಿ ಬರುತ್ತಿದ್ದರು; ಅವರೆಲ್ಲರಿಗೂ ವಾಸಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದೆಲ್ಲಾ ಜನರು ಬರುತ್ತಿದ್ದರು. ಅವರು ಕಾಯಿಲೆಯವರನ್ನೂ ದೆವ್ವಪೀಡಿತರಾಗಿದ್ದವರನ್ನೂ ಹೊತ್ತುಕೊಂಡು ಬರುತ್ತಿದ್ದರು. ಈ ಜನರೆಲ್ಲರಿಗೂ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆರುಜಲೆಮಾತ್ನಾ ಅಜು ಬಾಜುಚ್ಯಾ ಗಾವಾತ್ನಾ ಸಗ್ಳ್ಯಿ ಲೊಕಾ ತಾಂಡೊ ತಾಂಡೊಹೊವ್ನ್ ಯೆಯ್ತ್, ತೆನಿ ರೊಗಾತ್ ಹೊತ್ತ್ಯಾಕ್ನಿ ಅನಿ ಮ್ಹಾರು ಧರಲ್ಲ್ಯಾಕ್ನಿ ಉಕ್ಲುನ್ ಘೆವ್ನ್ ಯೆಯ್ತ್ ತೆಂಕಾ ಸಗ್ಳ್ಯಾಕ್ನಿ ಗುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:16
16 ತಿಳಿವುಗಳ ಹೋಲಿಕೆ  

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಆದರೆ ಜನರ ಗುಂಪು ಇದನ್ನು ತಿಳಿದು ಆತನ ಹಿಂದೆ ಹೋಗಲು ಆತನು ಅವರನ್ನು ಪ್ರೀತಿಯಿಂದ ಸ್ವೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತಾಡಿ ಕ್ಷೇಮಬೇಕಾದವರಿಗೆ ವಾಸಿಮಾಡಿದನು.


ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.


ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಒಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು


ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು