Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:18 - ಕನ್ನಡ ಸತ್ಯವೇದವು J.V. (BSI)

18 ಮತಾಭಿಮಾನದಿಂದ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಪಟ್ಟಣದ ಕಾವಲಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಅಪೊಸ್ತಲಾಕ್ನಿ ಧರುನ್ ಸಗ್ಳ್ಯಾಕ್ನಿ ಗೊತ್ತ್ ಹೊತ್ತ್ಯಾ ಮೊಟ್ಯಾ ಬಂಧಿಖಾನ್ಯಾತ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:18
10 ತಿಳಿವುಗಳ ಹೋಲಿಕೆ  

ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು