Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:2 - ಕನ್ನಡ ಸತ್ಯವೇದವು J.V. (BSI)

2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಒಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ಗಾವಲ್ಲ್ಯಾ ಪೈಸ್ಯಾತ್ ಅಪೊಸ್ತಲಾಕ್ನಿ ದಿತಾನಾ ಉಲ್ಲೆ ಪೈಸೆ ಅಪ್ನಾ ಸಾಟ್ನಿ ಮನುನ್ ನಿಪ್ವುನ್ ಥವ್ನ್ ಘೆಟಲ್ಯಾನಿ ಹೆ ತೆಜಾ ಬಾಯ್ಕೊ ಬಿ ಗೊತ್ತ್ ಅನಿ ತೆನಿ ಬಿ ಹೆಕಾ ಒಪ್ಕಿ ದಿಲ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:2
16 ತಿಳಿವುಗಳ ಹೋಲಿಕೆ  

ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ನಂಬಿದವರೆಲ್ಲರು ಒಗ್ಗಟ್ಟಾಗಿದ್ದು ತಮ್ಮದೆಲ್ಲವನ್ನೂ ಹುದುವಾಗಿ ಅನುಭೋಗಿಸುತ್ತಾ


ಆದರೆ ಅನನೀಯನೆಂಬ ಒಬ್ಬ ಮನುಷ್ಯನು ಸಪ್ಫೈರಳೆಂಬ ತನ್ನ ಹೆಂಡತಿಯ ಸಮೇತ, ಒಂದು ಭೂವಿುಯನ್ನು ಮಾರಿ


ಪೇತ್ರನು ಆಕೆಯನ್ನು ನೋಡಿ - ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು ಎಂದು ಕೇಳಲು ಆಕೆಯು - ಹೌದು, ಇಷ್ಟಕ್ಕೇ ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು