Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:20 - ಕನ್ನಡ ಸತ್ಯವೇದವು J.V. (BSI)

20 ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 “ಜಾವ್ನ್ ಗುಡಿತ್ ಇಬೆ ರ್‍ಹಾವಾ, ಅನಿ ನ್ಹವ್ಯಾ ಜಿವನಾಚ್ಯಾ ವಿಶಯಾತ್ ಹರ್ ಎಕ್ಲ್ಯಾಕ್ನಿಬಿ ಸಾಂಗಾ” ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:20
21 ತಿಳಿವುಗಳ ಹೋಲಿಕೆ  

ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು


ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.


ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು