Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:28 - ಕನ್ನಡ ಸತ್ಯವೇದವು J.V. (BSI)

28 ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಹ್ಯಾ ಮಾನ್ಸಾಚ್ಯಾ ವಿಶಯಾತ್ ಶಿಕಾಪ್ ಶಿಕ್ವುನಕಾಸಿ ಮನುನ್ ತುಮ್ಕಾ ಸಾಂಗ್ಲ್ಯಾಂವ್, ಖರೆ ತುಮಿ ಕಾಯ್ ಕರ್ಲ್ಯಾಸಿ? ಜೆರುಜಲೆಮಾತ್ ತುಮ್ಚ್ಯಾ ಶಿಕಾಪಾನಿಚ್ ಭರ್ಲ್ಯಾಸಿ, ಜೆಜುಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವೈರ್ ಘಾಲುಕ್ ಬಗುಲ್ಯಾಸಿ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:28
16 ತಿಳಿವುಗಳ ಹೋಲಿಕೆ  

ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು