ಅಪೊಸ್ತಲರ ಕೃತ್ಯಗಳು 5:3 - ಕನ್ನಡ ಸತ್ಯವೇದವು J.V. (BSI)3 ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಪೆದ್ರುನ್ ತೆಕಾ ಅನನಿಯಾಕ್ , ತುಜೆ ಸೆತ್ ಇಕುನ್ ಗಾವಾಲ್ಯಾ ಪೈಸಾತ್ ನಿಪ್ವುನ್ ಥವ್ನ್ ಘೆವ್ನ್ ಪವಿತ್ರ್ ಆತ್ಮ್ಯಾಕ್ ಮೊಸ್ ಕರ್ತೆ ಕಾಯ್ ಅನಿ ತುಜ್ಯಾ ಮನಾತ್ ಸೈತಾನಾಕ್ ಜಾಗೊ ದಿವಲ್ಲೆ ನ್ಹಯ್ ಮನುನ್ ಸಾಂಗ್ಲ್ಯಾನ್ . ಅಧ್ಯಾಯವನ್ನು ನೋಡಿ |