Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:9 - ಕನ್ನಡ ಸತ್ಯವೇದವು J.V. (BSI)

9 ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಪೆದ್ರುನ್ ತಿಕಾ ತಿಯಾ ಅನಿ ತುಜ್ಯಾ ಘವಾನ್ ಧನಿಯಾಚ್ಯಾ ಆತ್ಮ್ಯಾಕ್ ಪರಿಕ್ಷೆ ಕರಲ್ಲೆ ಕಶ್ಯಾಕ್? ಅಬಕ್‍! ತುಜ್ಯಾ ಘವಾಕ್‍ ಮಾಟಿ ಕರುನ್ ಯೆಲ್ಲಿ ಲೊಕಾ ಧಾರಾತ್ ಇಬೆ ಹಾತ್ ತುಕಾಬಿ ತಸೆಚ್ ಉಕ್ಲುನ್ ಘೆವ್ನ್ ಜಾತಾತ್ ಮನುನ್ ಸಾಂಗ್ಲ್ಯಾಲಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:9
24 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.


ನೀವು ಚೋರರೊಡನೆ ಸಂತೋಷದಿಂದ ಸೇರುತ್ತೀರಿ; ಜಾರರ ಒಡನಾಟವೇ ನಿಮಗೆ ಇಷ್ಟ.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ಆಗ ಯೌವನಸ್ಥರು ಎದ್ದು ಅವನನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.


ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು