Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:15 - ಕನ್ನಡ ಸತ್ಯವೇದವು J.V. (BSI)

15 ಆಗ ಹಿರೀಸಭೆಯಲ್ಲಿ ಕೂತಿದ್ದವರೆಲ್ಲರು ಅವನನ್ನು ದೃಷ್ಟಿಸಿ ನೋಡಿ ಅವನ ಮುಖವು ದೇವದೂತನ ಮುಖದಂತೆ ಇರುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಾಂಡ್ಯಾತ್ ಬಸಲ್ಲ್ಯಾ ಸಗ್ಳ್ಯಾ ಲೊಕಾನಿ ಸ್ತೆಪನಾಚ್ಯಾ ತೊಂಡಾಕುಚ್ ಬಗ್ಲ್ಯಾನಿ, ತೆಚೆ ತೊಂಡ್ ತೆಂಕಾ ದೆವಾಚ್ಯಾ ದುತಾಂಚ್ಯಾ ತೊಂಡಾ ಸಾರ್ಕೆ ಹೊಳ್ವುತಲೆ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:15
9 ತಿಳಿವುಗಳ ಹೋಲಿಕೆ  

ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.


ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.


ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು; ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು; ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ಆಗ ಮಹಾಯಾಜಕನು - ಈ ಮಾತುಗಳು ಹೌದೋ ಎಂದು ಕೇಳಿದ್ದಕ್ಕೆ ಅವನು - ಸಹೋದರರೇ, ತಂದೆಗಳೇ, ಕೇಳಿರಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು