Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:4 - ಕನ್ನಡ ಸತ್ಯವೇದವು J.V. (BSI)

4 ನಾವಾದರೋ ಪ್ರಾರ್ಥನೆಯನ್ನೂ ವಾಕ್ಯೋಪದೇಶವನ್ನೂ ಮಾಡುವದರಲ್ಲಿ ನಿರತರಾಗಿರುವೆವು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಅಮಿ ಅಮ್ಚೊ ಎಳ್ ಸಗ್ಳೊ ಮಾಗ್ನಿ ಕರುಕ್ ಅನಿ ದೆವಾಚ್ಯಾ ವಿಶಯಾತ್ ಶಿಕ್ವುಕ್ ಹೊತಾ” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:4
18 ತಿಳಿವುಗಳ ಹೋಲಿಕೆ  

ಇವರೆಲ್ಲರು ಏಕಮನಸ್ಸಾಗಿ ದೇವರ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಕೆಲವು ಮಂದಿ ಹೆಂಗಸರೂ ಯೇಸುವಿನ ತಾಯಿಯಾದ ಮರಿಯಳೂ ಆತನ ತಮ್ಮಂದಿರೂ ಅವರ ಸಂಗಡ ಇದ್ದರು.


ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರುವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಅವನ ಯಾಜಕವರ್ಗದ ದಿನಗಳು ತೀರಿದ ನಂತರ ಅವನು ತನ್ನ ಮನೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು