Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:5 - ಕನ್ನಡ ಸತ್ಯವೇದವು J.V. (BSI)

5 ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಗ್ಳ್ಯಾ ಲೊಕಾಕ್ನಿ ಹಿ ಯೆವ್ಜನ್ ಸಮಾ ದಿಸ್ಲಿ, ತಸೆ ಹೊವ್ನ್ ಹ್ಯಾ ಸಾತ್ ಲೊಕಾಕ್ನಿ ಎಚುನ್ ಘೆಟ್ಲ್ಯಾನಿ : ಸ್ತೆಪನ್ ಮನ್ತಲೊ ಮೊಟ್ಯಾ ವಿಶ್ವಾಸಾಚೊ ಅನಿ ಪವಿತ್ರ್ ಆತ್ಮ್ಯಾನ್ ಭರಲ್ಲೊ ಮಾನುಸ್, ಫಿಲಿಪ್ಪ್, ಪ್ರೊಖೊರ್, ನಿಕನೊರ್, ತಿಮೊನ್, ಪರ್ಮೆನ್, ಅನಿ ನಿಕ್ಲಾಂವ್ ಮನ್ತಲೊ ಜುದೆವ್ ಧರ್ಮಾಕ್ ಯೆಲ್ಲೊ ಮಾನುಸ್ ಹ್ಯೊ ಅಂತಿಯೊಕಾಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:5
24 ತಿಳಿವುಗಳ ಹೋಲಿಕೆ  

ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.


ಸ್ತೆಫನನು ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಆಗ ಮಹಾಯಾಜಕನು - ಈ ಮಾತುಗಳು ಹೌದೋ ಎಂದು ಕೇಳಿದ್ದಕ್ಕೆ ಅವನು - ಸಹೋದರರೇ, ತಂದೆಗಳೇ, ಕೇಳಿರಿ -


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ!


ಹಾಗೆಯೇ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.


ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ಆ ಮಾತು ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೇದಾಗಿ ತೋಚಿದ್ದರಿಂದ


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಇವರ ವಿಷಯವಾದ ವರ್ತಮಾನವು ಯೆರೂಸಲೇವಿುನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ ನಾನೂ ಹತ್ತರ ನಿಂತು ಒಪ್ಪಿಕೊಂಡು ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ ಅಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು