Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:10 - ಕನ್ನಡ ಸತ್ಯವೇದವು J.V. (BSI)

10 ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಕಾ ಯೆಲ್ಲ್ಯಾ ತರಾಸಾಂತ್ನಾ ದೆವಾನ್ ಸೊಡ್ವುಲ್ಯಾನ್, ಇಜಿಪ್ತ್ ದೆಶಾತ್ ಫೆರೊಹ್ ರಾಜಾಕ್ನಾ ದಯಾ ಗಾಯ್ ಸಾರ್ಕೊ ಹೊಲೆ, ಅನಿ ತೆಕಾ ರಾಜಾನ್ ಇಜಿಪ್ತ್ ,ಅನಿ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ಅದಿಪತಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:10
19 ತಿಳಿವುಗಳ ಹೋಲಿಕೆ  

ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ ಸಮ್ಮತಿಯನ್ನೂ ಪಡೆದುಕೊಳ್ಳುವಿ.


ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ ಅವನ ಪ್ರಾರ್ಥನೆಗೆ ಕಿವಿಗೊಟ್ಟನು.


ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.


ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು


ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು