Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:23 - ಕನ್ನಡ ಸತ್ಯವೇದವು J.V. (BSI)

23 ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬುತ್ತಾ ಇರಲು ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿನೋಡಬೇಕೆಂಬ ಆಶೆಯು ಅವನ ಹೃದಯದಲ್ಲಿ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಮೋಶೆಗೆ ನಲವತ್ತು ವರ್ಷ ವಯಸ್ಸು ಆಗಿದ್ದಾಗ ಅವನು ತನ್ನ ಸೋದರ ಇಸ್ರಯೇಲರನ್ನು ಸಂದರ್ಶಿಸಲು ಇಷ್ಟಪಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಕಾ ಚಾಳಿಸ್ ವರ್ಸಾ ಹೊಲ್ಯಾ ತನ್ನಾ ಇಸ್ರಾಯೆಲಾತ್ನಾ ಯೆವ್ನ್ ಹೊತ್ಯಾ ಅಪ್ಲ್ಯಾ ಭಾವಾಕ್ನಿ ಭೆಟುಚೆ ಮನುನ್ ನಿರ್ದಾರ್ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:23
18 ತಿಳಿವುಗಳ ಹೋಲಿಕೆ  

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;


ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.


ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಅವರು ಫರೋಹನ ಹತ್ತಿರ ಮಾತಾಡಿದ ಕಾಲದಲ್ಲಿ ಮೋಶೆ ಎಂಭತ್ತು ವರುಷದವನೂ ಆರೋನನು ಎಂಭತ್ತುಮೂರು ವರುಷದವನೂ ಆಗಿದ್ದರು.


ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು