Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:3 - ಕನ್ನಡ ಸತ್ಯವೇದವು J.V. (BSI)

3 ಅವನಿಗೆ ಕಾಣಿಸಿಕೊಂಡು - ನಿನ್ನ ಸ್ವದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ನೀನು ನಿನ್ನ ಬಂಧುಬಳಗವನ್ನೂ ತಾಯ್ನಾಡನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೋಗು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾನ್ ತೆಕಾ ತಿಯಾ ತುಜಿ ಸ್ವತಾಚಿ ಲೊಕಾ, ಅನಿ ತುಜೊ ದೆಶ್ ಸೊಡುನ್ ಮಿಯಾ ದಾಕ್ವಲ್ಲ್ಯಾ ದೆಶ್ಯಾಕ್ ಜಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:3
11 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿಸಿ ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ಆಗ ಅವನು ಕಸ್ದೀಯರ ದೇಶದಿಂದ ಹೊರಟುಹೋಗಿ ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.


ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು