Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:37 - ಕನ್ನಡ ಸತ್ಯವೇದವು J.V. (BSI)

37 ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಅನಿ ಮೊಯ್ಜೆನ್ ತ್ಯಾ ಲೊಕಾಕ್ನಿ ದೆವ್ ತುಮ್ಕಾ ಎಕ್ ಪ್ರವಾದಿ ದಿತಲೊ ಹಾಯ್ ತೊ ಪ್ರವಾದಿ ತುಮ್ಚ್ಯಾ ಸ್ವತಾಚ್ಯಾ ಲೊಕಾಂತ್ನಾಚ್ ಯೆತಾ, ತೊ ಮಾಜ್ಯಾ ನಮನಿಚ್ ರ್‍ಹಾತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:37
12 ತಿಳಿವುಗಳ ಹೋಲಿಕೆ  

ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ಆಗ ಆ ಮೋಡದೊಳಗಿಂದ - ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.


ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು