Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:41 - ಕನ್ನಡ ಸತ್ಯವೇದವು J.V. (BSI)

41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಕೈಗಳಿಂದ ಮಾಡಿದ ವಸ್ತುಗಳಲ್ಲಿ ಉಲ್ಲಾಸಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಮಾತ್ರವಲ್ಲ, ಹೋರಿಕರುವಿನ ಆಕಾರದ ವಿಗ್ರಹವೊಂದನ್ನು ಮಾಡಿ ಅದಕ್ಕೆ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಿಗಾಗಿ ಮೆರೆದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತಸೆ ಹೊವ್ನ್ ತ್ಯಾ ಲೊಕಾನಿ ವಾಂಸ್ರಾ ಸಾರ್ಕೆ ಎಕ್ ಮುರ್ತಿ ಕರುನ್ ತೆಕಾ ಬಲಿ ಭೆಟ್ವುಲ್ಯಾನಿ, ತ್ಯಾ ಲೊಕಾನಿ ಅಪ್ಲ್ಯಾ ಹಾತಿನ್ ಕರುನ್ ಘೆಟಲ್ಲ್ಯಾ ಮುರ್ತಿಯಾಂಚ್ಯಾ ವಿಶಯಾತ್ ಲೈ ಕುಶಿನ್ ಸನ್ ಕರ್‍ಲ್ಯಾನಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:41
11 ತಿಳಿವುಗಳ ಹೋಲಿಕೆ  

ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು - [ಇಸ್ರಾಯೇಲ್ಯರೇ,] ನಿಮ್ಮನ್ನು ಐಗುಪ್ತದಿಂದ ಕರಕೊಂಡು ಬಂದ ದೇವರು ಇದೇ ಎಂದು ಹೇಳಿ ನಿನ್ನನ್ನು ಅಸಡ್ಡೆ ಮಾಡಿದಾಗಲೂ


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು