Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:42 - ಕನ್ನಡ ಸತ್ಯವೇದವು J.V. (BSI)

42 ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಖರೆ ದೆವಾನ್ ತೆಂಕಾ ವಿರೊಧ್ ಹೊವ್ನ್ ಮಳ್ಬಾತ್ಲೊ ದಿಸ್, ಚಂದ್ರಾಮ್ ಅನಿ ಚುಕ್ಕಿಯಾಕ್ನಿ ಫುಜ್ಯಾ ಕರುಕ್ ಸೊಡುನ್ ದಿಲ್ಯಾನ್, ಹೆಚ್ಯಾ ವಿಶಯಾತ್ ಪ್ರವಾದ್ಯಾಂಚ್ಯಾ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್: ದೆವ್ ಅಸೊ ಮನ್ತಾ, ತುಮಿ ಜುದೆವಾಂಚ್ಯಾ ಲೊಕಾನಿ, ಭಜನ್ ಕರುಚೆ ಮನುನ್ ಚಾಳಿಸ್ ವರ್ಸಾ ಡಂಗ್ಳಿತ್ ರಾತಾನಾ ಮಾಕಾ ಜನಾವರಾಂಚಿ ಬಲಿ ಭೆಟ್ವುಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:42
26 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.


ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ


ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ಅವರು ಅರಣ್ಯದಲ್ಲಿ ನನ್ನನ್ನು ಪರೀಕ್ಷಿಸಿ ಶೋಧಿಸಿ ನಾಲ್ವತ್ತು ವರುಷ ನಾನು ನಡಿಸುತ್ತಿದ್ದ ಕೃತ್ಯಗಳನ್ನು ನೋಡಿದರು.


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಅದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು