ಅಪೊಸ್ತಲರ ಕೃತ್ಯಗಳು 7:5 - ಕನ್ನಡ ಸತ್ಯವೇದವು J.V. (BSI)5 ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ದೆವಾನ್ ತೆಕಾ ಖಲೆ ಸೆತ್ ಬಿ ದಿವ್ಕ್ ನಾ, ಎಕ್ ಗೆನ್ಬರ್ ಜಾಗೊ ಬಿ ದೆವಾನ್ ತೆಕಾ ದಿವ್ಕ್ ನಾ, ಖರೆ ತೆಕಾ ಅಜುನ್ ಪೊರಾಬಿ ಹೊವ್ಚ್ಯಾ ಅದ್ದಿಚ್ ತುಕಾ ಅನಿ ತುಜ್ಯಾ ಪೊರಾಕ್ನಿ ಹ್ಯೊ ದೆಶ್ ಮಿಯಾ ದಿತಾ ಮನುನ್ ದೆವಾನ್ ತೆಕಾ ಗೊಸ್ಟ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.