ಅಪೊಸ್ತಲರ ಕೃತ್ಯಗಳು 7:52 - ಕನ್ನಡ ಸತ್ಯವೇದವು J.V. (BSI)52 ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತುಮ್ಚ್ಯಾ ಪುರ್ವಜಾನಿ ತರಾಸ್ ದಿಸ್ತಾನಾ ಸೊಡಲೊ ಪ್ರವಾದಿ ಕೊನ್ ಹಾಯ್? ಅನಿ ತೆನಿ ತ್ಯಾ ನಿತಿವಂತಾಚ್ಯಾ ಯೆನ್ಯಾಚ್ಯಾ ಅದ್ದಿಚ್ ಬರಿ ಖಬರ್ ಸಾಂಗಲ್ಲ್ಯಾಕ್ನಿ ಜಿವ್ ಕಾಡ್ಲ್ಯಾನಿ. ಅಧ್ಯಾಯವನ್ನು ನೋಡಿ |