Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:10 - ಕನ್ನಡ ಸತ್ಯವೇದವು J.V. (BSI)

10 ಚಿಕ್ಕವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರೂ - ಇವನು ಮಹಾ ಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಪಟ್ಟಣದವರೆಲ್ಲರೂ ಹಿರಿಯರು ಕಿರಿಯರು ಎನ್ನದೆ, ಅವನ ಮಾತಿಗೆ ಕಾತರದಿಂದ ಕಿವಿಗೊಡುತ್ತಿದ್ದರು. ‘ದೇವರ ಮಹಾಶಕ್ತಿ’ ಇವನೇ ಎಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಪಟ್ಟಣದಲ್ಲಿಯ ಹಿರಿಯರು, ಕಿರಿಯರು ಎಲ್ಲರೂ ಅವನನ್ನು ಗೌರವಿಸಿ, “ಈ ಮನುಷ್ಯನು ಮಹಾಶಕ್ತಿ ಎನಿಸಿಕೊಂಡ ದೇವರ ಶಕ್ತಿ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಸಗ್ಳ್ಯಾ ಲೊಕಾನಿ ಮಟ್ಲ್ಯಾರ್ ಬಾರಿಕ್ಲ್ಯಾಂಚ್ಯಾಕ್ನಾ ಮೊಟ್ಯಾಂಚ್ಯಾ ಪತರ್ ಸಗ್ಳೆಬಿ ತೆಕಾ ಲೈ ಬಳ್ ಹಾಯ್ ಮನುನ್ ಸಾಂಗಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:10
12 ತಿಳಿವುಗಳ ಹೋಲಿಕೆ  

ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು; ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು;


ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ಇವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು. ಬಹಳ ಹೊತ್ತು ನೋಡಿಕೊಂಡಿದ್ದ ಮೇಲೆ ಅವನಿಗೆ ವಿಕಾರವೇನೂ ಆಗಿಲ್ಲವೆಂದು ಕಂಡು ಬೇರೆ ಯೋಚನೆಯುಳ್ಳವರಾಗಿ - ಇವನು ಒಬ್ಬ ದೇವರು ಎಂದು ಹೇಳಿಕೊಂಡರು.


ಪೌಲನು ಮಾಡಿದ್ದನ್ನು ಗುಂಪುಕೂಡಿದ್ದ ಜನರು ನೋಡಿ - ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.


ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು