Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:20 - ಕನ್ನಡ ಸತ್ಯವೇದವು J.V. (BSI)

20 ಆದರೆ ಪೇತ್ರನು ಅವನಿಗೆ - ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಪೆದ್ರು ಸಿಮೊನಾಕ್, “ತಿಯಾ ನಾಸ್ ಹೊ! ಅನಿ ತುಜೆ ಪೈಸೆಬಿ ತುಜ್ಯಾ ವಾಂಗ್ಡಾ ನಾಸ್ ಹೊಂವ್ದಿತ್!” ದೆವಾಚಿ ವರಾ ಪೈಸೆ ದಿವ್ನ್ ಘೆವ್ಕ್ ಹೊತಾ ಮನುನ್ ತಿಯಾ ಚಿಂತ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:20
23 ತಿಳಿವುಗಳ ಹೋಲಿಕೆ  

ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ಆಗ ದಾನಿಯೇಲನು ಸನ್ನಿಧಿಯಲ್ಲಿ - ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ; ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -


ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ?


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


(ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.


ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ.


ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು.


ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮ ವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು