Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:21 - ಕನ್ನಡ ಸತ್ಯವೇದವು J.V. (BSI)

21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಕಾಮಾತ್ನಿ ತಿಯಾ ಅಮ್ಚ್ಯಾ ವಾಂಗ್ಡಾ ವಾಟೊ ಅನಿ ಭಾಗ್ ಘೆವ್ಕ್ ಹೊಯ್ನಾ, ತುಜೊ ಮನ್ ದೆವಾಚ್ಯಾ ಫಿಡೆ ಸಮಾನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:21
19 ತಿಳಿವುಗಳ ಹೋಲಿಕೆ  

ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ರೂಬೇನ್ಯರೇ, ಗಾದ್ಯರೇ, ಯೆಹೋವನು ನಮಗೂ ನಿಮಗೂ ನಡುವೆ ಯೊರ್ದನ್ ಹೊಳೆಯನ್ನು ಮೇರೆಯಾಗಿಟ್ಟಿದ್ದಾನೆ. ಆತನಲ್ಲಿ ನಿಮಗೇನೂ ಪಾಲಿಲ್ಲ ಎಂದು ಹೇಳಿ ಅವರನ್ನು ದೇವಭಕ್ತಿಯಿಂದ ತೊಲಗಿಸಿ ಬಿಟ್ಟಾರು ಎಂಬ ಭಯದಿಂದ ನಾವು -


ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.


ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನಾನು ಅವರಿಗೆ - ಪರಲೋಕದೇವರು ನಮಗೆ ಸಾಫಲ್ಯವನ್ನನುಗ್ರಹಿಸುವನು. ಆದದರಿಂದ ಆತನ ಸೇವಕರಾದ ನಾವು ಕಟ್ಟುವದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಯೆರೂಸಲೇವಿುನಲ್ಲಿ ಪಾಲೂ ಹಕ್ಕೂ ಹೆಸರೂ ಇರುವದಿಲ್ಲ ಎಂದು ಉತ್ತರಕೊಟ್ಟೆನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು