Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:23 - ಕನ್ನಡ ಸತ್ಯವೇದವು J.V. (BSI)

23 ಯಾಕಂದರೆ ನೀನು ಹಾನಿಕರವಾದ ವಿಷವೂ ದುಷ್ಟತ್ವದಲ್ಲಿ ಬಿಗಿಯುವ ಬಂಧನವೂ ಆಗಿರುವವನೆಂದು ಕಾಣುತ್ತದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ಕಹಿತನದಿಂದ ತುಂಬಿರುವೆ; ಪಾಪ ಬಂಧನದಲ್ಲಿರುವೆ ಎಂದು ಕಾಣುತ್ತಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಿಯಾ ಲೈ ಕೊಡುಪಾನಾನ್ ಭರಲ್ಲೆ, ಅನಿ ಪಾಪಾಕ್ ಗುಲಾಮ್ ಹೊವ್ನ್ ಹೊತ್ತೆ ಮಿಯಾ ಬಗಟ್ಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:23
18 ತಿಳಿವುಗಳ ಹೋಲಿಕೆ  

ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ನಾನು ಅಲೆದು ಕಷ್ಟಪಟ್ಟದ್ದನ್ನು ಚಿತ್ತಕ್ಕೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕ ಮಾಡಿಕೋ,


ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.


ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.


ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.


ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು ಅವನೊಳಗೆ ಹಾವಿನ ವಿಷವಾಗುವದು.


ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು