Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:33 - ಕನ್ನಡ ಸತ್ಯವೇದವು J.V. (BSI)

33 ಆತನಿಗುಂಟಾದ ದೀನಾವಸ್ಥೆಯಲ್ಲಿ ನ್ಯಾಯವು ಇಲ್ಲದೆಹೋಯಿತು. ಆತನ ಸಕಾಲದವರನ್ನು ಹೇಳತಕ್ಕದ್ದೇನು? ಆತನ ಜೀವವನ್ನು ಭೂವಿುಯ ಮೇಲಿನಿಂದ ತೆಗೆದುಬಿಟ್ಟರಲ್ಲಾ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ಮಾನುನ್ ಘೆಟಲ್ಯಾ ಸಾಟ್ನಿ ತೆಕಾ ನ್ಯಾಯ್ ಗಾವ್ಕನಾ ತೆಚ್ಯಾ ಪುರ್ವಜಾಂಚ್ಯಾ ವಿಶಯಾತ್ ಸಾಂಗುಕ್ ಕೊನಾಕ್ಬಿ ಬಳ್ ನಾ ಕಶ್ಯಾಕ್ ಮಟ್ಲ್ಯಾರ್, ಜಿಮ್ನಿ ವೈನಾ ತೆಜೊ ಜಿವನ್ ಸರುನ್ಗೆತ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:33
17 ತಿಳಿವುಗಳ ಹೋಲಿಕೆ  

ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಯೋಬನು - ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]!


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಕಂಚುಕಿಯು ಈ ವಚನವನ್ನು ಕುರಿತು - ಪ್ರವಾದಿಯು ಇದನ್ನು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು