Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:7 - ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಥೈತ್ಲ್ಯಾ ಲೈ ಲೊಕಾಕ್ನಿ ಧರಲೊ ಮಾರು ತೆಂಕಾ ಸೊಡುನ್ ಜಾತಾನಾ ಮೊಟ್ಯಾನ್ ಅವಾಜ್ ಕರುಂಗೆತ್ ಗೆಲೊ ಅನಿ ಲೈ ಸೊಟ್ಯಾಕ್ನಿ ಅನಿ ವಾರೆ ಮಾರಲ್ಯಾಕ್ನಿ ಗುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:7
16 ತಿಳಿವುಗಳ ಹೋಲಿಕೆ  

ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.


ಯೆರೂಸಲೇವಿುನ ಸುತ್ತಲಿರುವ ಊರುಗಳ ಜನರು ಸಹ ರೋಗಿಗಳನ್ನೂ ದೆವ್ವಗಳ ಕಾಟವಿದ್ದವರನ್ನೂ ಹೊತ್ತುಕೊಂಡು ಗುಂಪು ಗುಂಪಾಗಿ ಬರುತ್ತಿದ್ದರು; ಅವರೆಲ್ಲರಿಗೂ ವಾಸಿಯಾಗುವದು.


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - ಸ್ವಾಮೀ, ದೆವ್ವಗಳು ಕೂಡಾ ನಿನ್ನ ಹೆಸರನ್ನು ಕೇಳಿ ನಮಗೆ ಅಧೀನವಾಗುತ್ತವೆ ಅಂದರು.


ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಏಕಮನಸ್ಸಾಗಿ ಲಕ್ಷ್ಯಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು