ಅಪೊಸ್ತಲರ ಕೃತ್ಯಗಳು 9:12 - ಕನ್ನಡ ಸತ್ಯವೇದವು J.V. (BSI)12 ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣುಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ನೋಡಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲದೆ ಅನನೀಯ ಎಂಬವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತನ್ನ ದೃಷ್ಟಿ ಪುನಃ ಬರುವಂತೆ ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ಬಂದು ತನ್ನ ಮೇಲೆ ಕೈಗಳನ್ನಿಡುವುದನ್ನು ಅವನು ದರ್ಶನದಲ್ಲಿ ಕಂಡಿದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅನನಿಯಸ್ ಮನ್ತಲೊ ಎಕ್ಲೊ ತೆಚ್ಯಾ ಜಗ್ಗೊಳ್ ಯೆವ್ನ್ ಅಪ್ಲಿ ಹಾತಾ ತೆಚ್ಯಾ ವೈರ್ ಥವಲ್ಯಾ ತನ್ನಾ ತೆಕಾ ಪರ್ತುನ್, ಅನಿ ಡೊಳೆ ದಿಸುಕ್ ಲಾಗ್ತಾತ್ “ ಮನ್ತಲೆ ದರ್ಶನ್ ತೆಕಾ ದಿಸಲ್ಲೆ ಹಾಯ್”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |