Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:18 - ಕನ್ನಡ ಸತ್ಯವೇದವು J.V. (BSI)

18 ಕೂಡಲೆ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣು ಕಾಣತೊಡಗಿತು. ಎದ್ದು ದೀಕ್ಷಾಸ್ನಾನವನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಕ್ಷಣವೇ, ಸೌಲನ ಕಣ್ಣುಗಳಿಂದ ಪರೆ ಕಳಚಿದಂತಾಗಿ ಅವನಿಗೆ ಪುನಃ ದೃಷ್ಟಿ ಬಂದಿತು. ಅವನು ಎದ್ದು ದೀಕ್ಷಾಸ್ನಾನವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಾಬೊಡ್ತೊಬ್ ಖವ್ಳಾಂಚ್ಯಾ ಸಾರ್ಕೆ ಹೊತ್ತೆ ಕಾಯ್ಕಿ ಎಕ್ ಸಾವ್ಲಾಚ್ಯಾ ಡೊಳ್ಯಾಂತ್ನಾ ಖಾಲ್ತಿ ಪಡ್ಲೆ, ತೆಕಾ ಪರ್ತುನ್ ಡೊಳೆ ದಿಸುಕ್ ಲಾಗ್ಲೆ! ಸಾವ್ಲಾ ವೈರ್ ಉಟುನ್ ಇಬೆ ರ್‍ಹಾಲೊ ಅನಿ ತೆಕಾ ಬಾಲ್ತಿಮ್‍ ದಿವ್ನ್ ಹೊಲೆ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:18
11 ತಿಳಿವುಗಳ ಹೋಲಿಕೆ  

ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.


ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.


ತರುವಾಯ ಊಟಮಾಡಿ ಬಲ ಹೊಂದಿದನು.


ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು ನಿಂತು - ಸಹೋದರನಾದ ಸೌಲನೇ, ನಿನಗೆ ಕಣ್ಣುಕಾಣಿಸಲಿ ಎಂದು ಹೇಳಿದನು. ಹೇಳಿದಾಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು