Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:2 - ಕನ್ನಡ ಸತ್ಯವೇದವು J.V. (BSI)

2 ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದಮಸ್ಕಾ ಮನ್ತಲ್ಯಾ ಶಾರಾತ್ ಕ್ರಿಸ್ತಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಕ್ನಿ ವಳ್ಕುನ್ ಬಾಯ್ಕಾಮಾನ್ಸಾ, ಘವ್ಮಾನ್ಸಾ ಮನುನ್ ಬಗಿನಸ್ತಾನಾ ಧರುನ್ ತೆಂಕಾ ಬಾಂದುನ್ ಜೆರುಜಲೆಮಾಕ್ ತೆಂಕಾ ಭಂದಿ ಕರುನ್ ಹಾನುಕ್ ಅಪ್ನಾಕ್ ಅಧಿಕಾರ್ ದಿಲ್ಲೊ ಹಾಯ್, ಮನುನ್ ಧಮಸ್ಕ್ ಶಾರಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಚಿಟ್ ಲಿವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:2
23 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.


ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.


ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು.


ಈ ಉದ್ದೇಶದಿಂದ ನಾನು ಮಹಾಯಾಜಕರಿಂದ ಅಧಿಕಾರವನ್ನೂ ಉದ್ಯೋಗವನ್ನೂ ಹೊಂದಿ ದಮಸ್ಕಕ್ಕೆ ಹೋಗುತ್ತಾ ನಾನು ದಾರಿಯಲ್ಲಿದ್ದಾಗ


ಈ ಅರಸನು ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು.


ಯೆರೂಸಲೇವಿುನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು.


ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು


ಯೆರೂಸಲೇವಿುಗೆ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು