Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:21 - ಕನ್ನಡ ಸತ್ಯವೇದವು J.V. (BSI)

21 ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಜೆ ಬೊಲ್ನೆ ಆಯ್ಕಲ್ಲಿ ಲೊಕಾ ಸಗ್ಳ್ಯಿ ಅಜಾಪ್ ಹೊಲಿ, ಅನಿ ಜೆರುಜಲೆಮಾತ್ ಹೊತ್ತೊ ಮಾನುಸ್ ಹ್ಯೊಚ್, ಜೆಜುಚ್ಯಾ ನಾವಾರ್ ವಿಶ್ವಾಸ್ ಥವ್ತಲ್ಯಾ ಲೊಕಾಕ್ನಿ ಜಿವಾನಿ ಮಾರುಕ್ ಬಗಿತ್ ಹೊತ್ತೊ! ಜೆಜುಚ್ಯಾ ಲೊಕಾಕ್ನಿ ಧರುನ್ ಮುಖ್ಯ್ ಯಾಜಕಾಂಚ್ಯಾಕ್ಡೆ ವೊಡುನ್ ನ್ಹೆವ್ಚೆ ಮನುನ್ ಯೆಲ್ಲೊ ಹ್ಯೊಚ್ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:21
20 ತಿಳಿವುಗಳ ಹೋಲಿಕೆ  

ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಇವನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಕೂತು ಭಿಕ್ಷಾಬೇಡುತ್ತಿದ್ದವನೆಂದು ಗುರುತುಹಿಡಿದು ಅವನಿಗೆ ಸಂಭವಿಸಿದ್ದಕ್ಕೆ ವಿಸ್ಮಯಹಿಡಿದವರಾಗಿ ಬಹಳ ಬೆರಗಾದರು.


ಎಲ್ಲರೂ ಬೆರಗಾಗಿ ಕಳವಳಗೊಂಡು - ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.


ಆ ಸಪ್ಪಳವಾದಾಗ ಜನರು ಗುಂಪುಗುಂಪಾಗಿ ಕೂಡಿಬಂದು ಪ್ರತಿಯೊಬ್ಬರು ತಮ್ಮ ತಮ್ಮ ಭಾಷೆಯಲ್ಲೇ ಇವರು ಮಾತಾಡುವದನ್ನು ಕೇಳಿ ಭ್ರಮೆಗೊಂಡರು.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.


ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರಾಗ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು