Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:26 - ಕನ್ನಡ ಸತ್ಯವೇದವು J.V. (BSI)

26 ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಸಾವ್ಲ್ ಜೆರುಜಲೆಮಾಕ್ ಗೆಲೊ, ತೆನೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಚೆ ಮನುನ್ ಕಟ್ಪಟ್ಲ್ಯಾನ್, ಖರೆ ತೆನಿ ಸಗ್ಳ್ಯಾನಿ ತೆಕಾ ಭಿಂವ್ಲ್ಯಾನಿ, ಸಾವ್ಲ್ ಖರೆಚ್ ಜೆಜುಚೊ ಶಿಸಾ ಮನ್ತಲೆ ತೆನಿ ವಿಶ್ವಾಸ್ ಕರುಕ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:26
9 ತಿಳಿವುಗಳ ಹೋಲಿಕೆ  

ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ತರುವಾಯ ಊಟಮಾಡಿ ಬಲ ಹೊಂದಿದನು.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.


ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಆದರೆ ಅವನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ ಒಂದು ಹೆಡಿಗೆಯಲ್ಲಿ ಕೂಡ್ರಿಸಿ ಗೋಡೆಯೊಳಗಿಂದ ಇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು