Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:33 - ಕನ್ನಡ ಸತ್ಯವೇದವು J.V. (BSI)

33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ಲಿಡ್ಡಾತ್ ಎನೆಯಾ ಮನ್ತಲ್ಯಾ ಎಕ್ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ವಾರೆಮಾರುನ್ ಆಟ್ ವರ್ಸಾಚ್ಯಾನ್ ತೊ ಹಾತ್ರಾನಾತುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:33
13 ತಿಳಿವುಗಳ ಹೋಲಿಕೆ  

ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.


ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.


ಈ ಸೂಚಕಕಾರ್ಯದಿಂದ ಸ್ವಸ್ಥತೆಹೊಂದಿದ ಆ ಮನುಷ್ಯನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.


ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಈಗ ಹೇಗೆ ಕಣ್ಣು ಬಂದವೋ ಅರಿಯೆವು; ಕಣ್ಣು ಕೊಟ್ಟವನು ಯಾರೋ ಅರಿಯೆವು; ಇವನನ್ನೇ ಕೇಳಿರಿ; ಪ್ರಾಯದವನಾಗಿದ್ದಾನಲ್ಲಾ; ಇವನೇ ತನ್ನ ವಿಷಯವಾಗಿ ಹೇಳುವನು ಎಂದು ಉತ್ತರಕೊಟ್ಟರು.


ಯೇಸು ಹಾದುಹೋಗುತ್ತಿರುವಾಗ ಒಬ್ಬ ಹುಟ್ಟುಕುರುಡನನ್ನು ಕಂಡನು.


ಅಲ್ಲಿ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.


ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;


ಆಗ ಹನ್ನೆರಡು ವರುಷದಿಂದ ರಕ್ತ ಕುಸುಮರೋಗವಿದ್ದ ಒಬ್ಬ ಹೆಂಗಸು ಬಂದಳು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..


ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು