Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:40 - ಕನ್ನಡ ಸತ್ಯವೇದವು J.V. (BSI)

40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪೆದ್ರುನ್ ಸಗ್ಳ್ಯಾ ಲೊಕಾಕ್ನಿ ಖೊಲಿತ್ನಾ ಭಾಯ್ರ್ ಧಾಡುನ್ ಡಿಂಬಿಯಾ ಘಾಲುನ್ ಮಾಗ್ನಿ ಕರ್‍ಲ್ಯಾನ್, ಮಾನಾ ತಬಿಥಾಚ್ಯಾ ಮಡ್ಯಾಕ್ಡೆ ಪರ್ತುನ್ “ತಬಿಥಾ, ಉಟುನ್ ಇಬೆರಾ” ಮಟ್ಲ್ಯಾನ್, ತಿನೆ ಅಪ್ಲೆ ಡೊಳೆ ಉಗಡ್ಲಿನ್, ಅನಿ ಪೆದ್ರುಕ್ ಬಗುನ್ ಉಟುನ್ ಬಸ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:40
14 ತಿಳಿವುಗಳ ಹೋಲಿಕೆ  

ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಕ್ಕೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ಆದರೆ ಆತನು ಆಕೆಯ ಕೈ ಹಿಡಿದು - ಅಮ್ಮಣ್ಣೀ, ಏಳು ಎಂದು ಕೂಗಿದನು.


ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು.


ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ


ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.


ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ


ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು