Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:41 - ಕನ್ನಡ ಸತ್ಯವೇದವು J.V. (BSI)

41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಪೆದ್ರುನ್ ಹಾತ್ ಧರುನ್ ತಿಕಾ ಉಟುನ್ ಇಬೆ ರಾವ್ಕ್ ಮಜ್ಜತ್ ಕರ್‍ಲ್ಯಾನ್, ಮಾನಾ ತೆನಿ ಘವ್ಮರಲ್ಯಾ ಬಾಯ್ಕಾಮಾನ್ಸಾಕ್ನಿ, ಅನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಖೊಲಿತ್ ಬಲ್ವುನ್ ತಬಿಥಾ ಝಿತ್ತಿ ಹೊಲ್ಲಿ ತೆಂಕಾ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:41
15 ತಿಳಿವುಗಳ ಹೋಲಿಕೆ  

ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.


ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು;


ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು.


ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.


ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.


ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.


ಅವನ ತಾಯಿಗೆ ಒಪ್ಪಿಸಿ - ಇಗೋ, ನೋಡು; ನಿನ್ನ ಮಗನು ಜೀವಿಸುತ್ತಾನೆ ಅಂದನು.


ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..


ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಎಲೀಷನು ಅದನ್ನು ತೆಗೆದುಕೋ ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು