Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:42 - ಕನ್ನಡ ಸತ್ಯವೇದವು J.V. (BSI)

42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಜೊಪ್ಪಾತ್ಲ್ಯಾ ಸಗ್ಳ್ಯಾಕ್ಡೆ ಹೊತ್ತ್ಯಾ ಲೊಕಾಕ್ನಿಬಿ ಹಿ ಖಬರ್ ಕಳ್ಲಿ ಹ್ಯಾ ಲೊಕಾತ್ನಿ ಲೈ ಲೊಕಾನಿ ಧನಿಯಾಚೆರ್ ವಿಶ್ವಾಸ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:42
17 ತಿಳಿವುಗಳ ಹೋಲಿಕೆ  

ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಯಾಕಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಹೋಗಿ ಯೇಸುವನ್ನು ನಂಬುವವರಾದರು.


ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು;


ಕರ್ತನ ಹಸ್ತವು ಅವರಿಗೆ ಸಹಾಯವಾದ್ದರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.


ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.


ಗತ್‍ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.


ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸದವರೆಗೂ ಇದ್ದನು.


ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.


ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.


ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು; ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಇಳಿಸಲ್ಪಟ್ಟು ನಾನಿದ್ದಲ್ಲಿಗೆ ಬಂತು.


ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ - ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವದನ್ನು ಕಂಡೆನು. ಆ ದೂತನು - ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು