Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:1
15 ತಿಳಿವುಗಳ ಹೋಲಿಕೆ  

ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು; ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತಾಡಿ ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.


ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟುಬಂದ ಎರಡನೆಯ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಅರಣ್ಯದಲ್ಲಿ


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ


ಎರಡನೆಯ ವರುಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು.


ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಬೇಕು.


ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.


ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮೂಹದವರೆಲ್ಲರನ್ನೂ ಕೂಡಿಸಿದರು. ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ಬರಸಿಕೊಂಡರು.


ಅವರು ರೆಫೀದೀಮನ್ನು ಬಿಟ್ಟು ಆ ಅರಣ್ಯಕ್ಕೆ ಬಂದಾಗ ಅಲ್ಲಿ ಬೆಟ್ಟಕ್ಕೆ ಎದುರಾಗಿ ಇಳುಕೊಂಡರು.


ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು.


ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು