ಅರಣ್ಯಕಾಂಡ 1:18 - ಕನ್ನಡ ಸತ್ಯವೇದವು J.V. (BSI)18 ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮೂಹದವರೆಲ್ಲರನ್ನೂ ಕೂಡಿಸಿದರು. ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ಬರಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು. ಅಧ್ಯಾಯವನ್ನು ನೋಡಿ |