Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:4 - ಕನ್ನಡ ಸತ್ಯವೇದವು J.V. (BSI)

4 ಈ ಕೆಲಸಕ್ಕಾಗಿ ಒಂದೊಂದು ಕುಲದಲ್ಲಿ ಆಯಾ ಕುಲದ ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯಮಾಡಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:4
19 ತಿಳಿವುಗಳ ಹೋಲಿಕೆ  

ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು.


ಅವನು ಇಸ್ರಾಯೇಲ್ಯರೆಲ್ಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಿದನು.


ಕುಲಕ್ಕೆ ಒಬ್ಬನಂತೆ ಹತ್ತುಮಂದಿ ಪ್ರಭುಗಳನ್ನೂ ಕಳುಹಿಸಿದರು. ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯನಾಗಿದ್ದನು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.


ಆ ವಿುದ್ಯಾನ್ ಸ್ತ್ರೀಯೊಡನೆ ಹತವಾದವನ ಹೆಸರು ಜಿಮ್ರೀ; ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾದ ಸಾಲೂ ಎಂಬವನ ಮಗ.


ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.


ಲೇವಿ ಕುಲಕ್ಕೂ ಒಂದು ಕೋಲು ಇರುವದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಮೋಶೆಯು ಇಸ್ರಾಯೇಲ್ಯರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ - ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ -


ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು.


ಮೋಶೆ ಆರೋನರೂ ಕುಲಪ್ರತಿನಿಧಿಗಳಾದ ಆ ಹನ್ನೆರಡುಮಂದಿ ಪ್ರಾಧಾನರೂ ಲೆಕ್ಕಿಸಿದ ಇಸ್ರಾಯೇಲ್ಯರು ಇಷ್ಟು ಜನ.


ಮೋಶೆ ಆರೋನರೂ ಸಮೂಹದ ಪ್ರಧಾನರೂ ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿದರು.


ಇಸ್ರಾಯೇಲ್ಯರ ಪ್ರಧಾನಪುರುಷರು ಅಂದರೆ ಗೋತ್ರಪ್ರಮುಖರಾಗಿದ್ದು ಕುಲಾಧಿಪತಿಗಳಾಗಿಯೂ ಲೆಕ್ಕಿಸಲ್ಪಟ್ಟ ಭಟರ ಮೇಲೆ ನಾಯಕರಾಗಿಯೂ ಇದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು