ಅರಣ್ಯಕಾಂಡ 1:50 - ಕನ್ನಡ ಸತ್ಯವೇದವು J.V. (BSI)50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |