ಅರಣ್ಯಕಾಂಡ 1:53 - ಕನ್ನಡ ಸತ್ಯವೇದವು J.V. (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.” ಅಧ್ಯಾಯವನ್ನು ನೋಡಿ |
ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.