Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:54 - ಕನ್ನಡ ಸತ್ಯವೇದವು J.V. (BSI)

54 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:54
17 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.


ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಯಜ್ಞವೇದಿಯ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳಕೊಳ್ಳುವರು.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.


ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ್ದೇನಂದರೆ -


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಾಯೇಲ್ಯರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡಿಸಿದರು.


ಹೀಗೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಿಸಿದನು.


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ ಆರೋನರೂ ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮಾಡಿದರು.


ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಅದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.


ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ವಿುಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರ ನಡೆದು ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು