Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:17 - ಕನ್ನಡ ಸತ್ಯವೇದವು J.V. (BSI)

17 ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಳಿಕ ದೇವದರ್ಶನದ ಗುಡಾರವನ್ನು ಇಳಿಸಿದ್ದೇ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಪವಿತ್ರ ಗುಡಾರವನ್ನು ಕೆಳಗಿಳಿಸಲಾಯಿತು. ಗೇರ್ಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರ ಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ, ಮೆರಾರೀಯರೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:17
11 ತಿಳಿವುಗಳ ಹೋಲಿಕೆ  

ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ


ಜೆಬುಲೂನ್ ಕುಲದ ಸೇನಾನಾಯಕನು ಹೇಲೋನನ ಮಗನಾದ ಎಲೀಯಾಬನು.


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ವಿುಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬ ಪ್ರಧಾನರು. ಇವರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು