Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:32 - ಕನ್ನಡ ಸತ್ಯವೇದವು J.V. (BSI)

32 ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಮೇಲನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದ್ದರಿಂದ ನೀನು ನಮಗೆ ಕಣ್ಣಾಗಿರಬೇಕು. ನೀನು ನಮ್ಮ ಸಂಗಡ ಬಂದರೆ ಸರ್ವೇಶ್ವರ ನಮಗೆ ಮಾಡುವ ಒಳಿತೆಲ್ಲವನ್ನು ನಿನ್ನೊಂದಿಗೆ ಹಂಚಿಕೊಳ್ಳುತ್ತೇವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೀನು ನಮ್ಮ ಸಂಗಡ ಬಂದರೆ ಯೆಹೋವ ದೇವರು ನಮಗೆ ಕೊಡುವುದಕ್ಕಿರುವ ಒಳ್ಳೆಯದನ್ನು ನಾವು ನಿನ್ನೊಂದಿಗೆ ಹಂಚಿಕೊಳ್ಳುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:32
8 ತಿಳಿವುಗಳ ಹೋಲಿಕೆ  

(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)


ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.


ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು