Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:36 - ಕನ್ನಡ ಸತ್ಯವೇದವು J.V. (BSI)

36 ಅದು ನಿಂತಾಗ ಅವನು - ಯೆಹೋವನೇ, ಇಸ್ರಾಯೇಲ್ಯರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ತಿರಿಗಿ ಬರೋಣವಾಗಲಿ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಮಂಜೂಷ ನಿಂತಾಗ: “ಮರಳಿ ಬರೋಣವಾಗಲಿ, ಸರ್ವೇಶ್ವರಾ ಸಹಸ್ರಾರು ಇಸ್ರಯೇಲ್ ಕುಟುಂಬಗಳ ಬಳಿಗೆ,” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪವಿತ್ರ ಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ, ಮೋಶೆಯು, “ಯೆಹೋವನೇ ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:36
5 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದಲ್ಲಿ ಸೇರೋಣವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು