ಅರಣ್ಯಕಾಂಡ 11:11 - ಕನ್ನಡ ಸತ್ಯವೇದವು J.V. (BSI)11 ಆಗ ಮೋಶೆ ಯೆಹೋವನಿಗೆ - ಈ ಜನರನ್ನು ನಡಿಸಿಕೊಂಡು ಹೋಗುವ ಭಾರವನ್ನು ನನ್ನ ಮೇಲೆ ಹೊರಿಸಿ ನೀನು ಯಾಕೆ ನಿನ್ನ ದಾಸನಿಗೆ ಅಪಕಾರ ಮಾಡುತ್ತೀಯೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆತ ಸರ್ವೇಶ್ವರನಿಗೆ, “ನಿಮ್ಮ ದಾಸನಾದ ನನಗೇಕೆ ಈ ಜನರನ್ನು ಕರೆದೊಯ್ಯುವ ಭಾರವನ್ನು ಹಾಕಿದಿರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ? ಅಧ್ಯಾಯವನ್ನು ನೋಡಿ |