ಅರಣ್ಯಕಾಂಡ 11:16 - ಕನ್ನಡ ಸತ್ಯವೇದವು J.V. (BSI)16 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನೀನು ತಿಳುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡ ಕರಿಸಿ ದೇವದರ್ಶನದ ಗುಡಾರದ ಬಾಗಲಿಗೆ ಕರತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. ಅಧ್ಯಾಯವನ್ನು ನೋಡಿ |