ಅರಣ್ಯಕಾಂಡ 11:17 - ಕನ್ನಡ ಸತ್ಯವೇದವು J.V. (BSI)17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |