Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:18 - ಕನ್ನಡ ಸತ್ಯವೇದವು J.V. (BSI)

18 ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:18
16 ತಿಳಿವುಗಳ ಹೋಲಿಕೆ  

ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವದಕ್ಕೆ ಮನಸ್ಸಿಲ್ಲದವರಾಗಿ ಅವನನ್ನು ತಳ್ಳಿ ಬಿಟ್ಟು ತಿರಿಗಿ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಬಿದ್ದುಕೊಂಡು ಗಟ್ಟಿಯಾಗಿ ಅಳುತ್ತಾ -


ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.


ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ಯೆಹೋವಸನ್ನಿಧಿಗೆ ಸೇರುವ ಯಾಜಕರೂ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ಯೆಹೋವನು ಫಕ್ಕನೆ ಸಂಹಾರಮಾಡಾನು ಎಂದು ಹೇಳಿದನು.


ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಉಲ್ಲಂಘಿಸಿ - ಅಯ್ಯೋ! ನಾವು ಐಗುಪ್ತದೇಶವನ್ನು ಬಿಟ್ಟುಬಂದದ್ದು ಮೋಸವಾಯಿತೆಂದು ಆತನ ಮುಂದೆ ಅತ್ತದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ,


ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ


ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ.


ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು