Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:21 - ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಮೋಶೆ - ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು; ಆದಾಗ್ಯೂ ನೀನು - ಇವರು ಪೂರಾ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ ಎಂದು ಹೇಳಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಮೋಶೆಯು, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಅವರು ಒಂದು ತಿಂಗಳು ಪೂರ್ತಿ ತಿನ್ನುವ ಹಾಗೆ, ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀವು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:21
9 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರೂ ಮಕ್ಕಳೂ ಅಲ್ಲದೆ ಅವರ ಕಾಲ್ಬಲವೇ ಸುಮಾರು ಆರು ಲಕ್ಷ ಗಂಡಸರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಇಸ್ರಾಯೇಲ್ಯರಲ್ಲಿ ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟವರು ಇವರೇ; ಆ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರು 603,550 ಮಂದಿ.


ಇವರು ನನ್ನ ಬಳಿಗೆ ಅಳುತ್ತಾ ಬಂದು - ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು ಎಂದು ಕೇಳಿಕೊಳ್ಳುತ್ತಾರಲ್ಲಾ; ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಆಡುಕುರಿಗಳನ್ನೂ ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡುಕೊಳ್ಳಬೇಕೋ? ಎಂದು ಹೇಳಲಾಗಿ


ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 601,730.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು