ಅರಣ್ಯಕಾಂಡ 11:29 - ಕನ್ನಡ ಸತ್ಯವೇದವು J.V. (BSI)29 ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು. ಅಧ್ಯಾಯವನ್ನು ನೋಡಿ |